Hot Posts

10/recent/ticker-posts

ಹೇಮಾಮಾಲಿನಿ"ರಾಜ್ಯ"(ಸಭೆ)ಭಾರ

ರಾಜ್ಯದಿಂದ ರಾಜ್ಯಸಭೆಗೆ ನಟಿ ಹೇಮಾ ಮಾಲಿನಿಯನ್ನು ಆಯ್ಕೆ ಮಾಡಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಬಲವಾಗಿ ಸಮರ್ಥಿಸಿಕೊಂಡಿದ್ದು, ಕಲಾವಿದರು, ಸಾಹಿತಿಗಳನ್ನು ಒಂದು ಭಾಷೆ ಅಥವಾ ಪ್ರದೇಶಕ್ಕೆ ಸೀಮಿತಗೊಳಿಸುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.


ಭಾನುವಾರ ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಹೇಮಾಮಾಲಿನಿ ಬೇರೆ ರಾಜ್ಯದವರಾಗಿರಬಹುದು. ಆದರೆ ಅವರು ಭಾರತೀಯರಲ್ಲವಾ ಎಂದು ಪ್ರಶ್ನಿಸಿದರು.


ನಮ್ಮ ರಾಜ್ಯದವರಾಗಿದ್ದ ಎಸ್.ಆರ್.ಬೊಮ್ಮಾಯಿ, ಜಾರ್ಜ್ ಫರ್ನಾಂಡಿಸ್ ಅವರು ಬೇರೆ ರಾಜ್ಯದಿಂದ ಚುನಾಯಿತರಾಗಿದ್ದಾರೆ ಎಂದು ಉಲ್ಲೇಖಿಸುವ ಮೂಲಕ ಹೇಮಾಮಾಲಿನಿ ಆಯ್ಕೆಯನ್ನು ಸಮರ್ಥಿಸಿಕೊಂಡರು.


ಆ ನಿಟ್ಟಿನಲ್ಲಿ ಹೇಮಾಮಾಲಿನಿ ಸೋಮವಾರ ಮಧ್ಯಾಹ್ನ ಅಧಿಕೃತವಾಗಿ ತಮ್ಮ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ಹಾಜರಿದ್ದರು.


ಅಲ್ಲದೇ ಗೋಹತ್ಯೆ ನಿಷೇಧ ಕಾಯ್ದೆ ರಾಜ್ಯದಲ್ಲಿ ಜಾರಿಯಾಗಬೇಕು. ಈ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಬೇಕು ಎಂದು ಈ ಸಮಾವೇಶದ ಮೂಲಕ ಒತ್ತಾಯಿಸುತ್ತಿದ್ದೇನೆ ಎಂದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಖಚಿತ ಎಂದು ಈ ಸಂದರ್ಭದಲ್ಲಿ ಹೇಳಿದರು.

Отправить комментарий

0 Комментарии