Hot Posts

10/recent/ticker-posts

ಕಾಮನ ಹಬ್ಬ-ಹೋಳಿ


ಭೋಗಸಮಾಧಿಯಲ್ಲಿದ್ದ ಶಿವನು, ಪಾರ್ವತಿಯ ಜೊತೆ ಸಮಾಗಮ ಹೊಂದಲು ಸಾದ್ಯವಿರಲಿಲ್ಲ. ದೇವತೆಗಳು ನಿರುಪಾಯರಾಗಿ ಪಾರ್ವತಿಯಲ್ಲಿ ಮೋಹ ಹೊಂದುವಂತೆ ಮಾಡಲು ಕಾಮನಲ್ಲಿ ಬೇಡಿದರು. ಕಾಮ (ಮನ್ಮಥ) ಮತ್ತು ಅವನ ಪತ್ನಿ ರತಿದೇವಿ ಈ ಸತ್ಕಾರ್ಯಕ್ಕೆ ಒಪ್ಪಿದರು. ಭೋಗಸಮಾಧಿಯಲ್ಲಿದ್ದ ಶಿವನಿಗೆ ಹೂಬಾಣಗಳಿಂದ ಹೊಡೆದು ಸಮಾಧಿಯಿಂದ ಎಚ್ಚರಿಸಿದರು. ಇದರಿಂದ ಕುಪಿತಗೊಂಡ ಶಿವನು ತನ್ನ ಮೂರನೇ ಕಣ್ಣಿಂದ ಕಾಮನನ್ನು ಸುಟ್ಟು ಭಸ್ಮ ಮಾಡಿದನು. ರತಿದೇವಿ ದು:ಖದಿಂದ ಶಿವನಲ್ಲಿ ಪತಿಭಿಕ್ಷೆಯನ್ನು ಬೇಡಿದಳು. ಶಾಂತಗೊಂಡ ಶಿವನು ಪತ್ನಿಯೊಡನೆ ಮಾತ್ರ ಶರೀರಿಯಾಗುವಂತೆ ಕಾಮನಿಗೆ ವರ ಕೊಟ್ಟನು. ಈ ಘಟನೆ ನಡೆದದ್ದು ಫಾಲ್ಗುಣ ಶುದ್ಧ ಪೂರ್ಣಿಮೆಯಂದು. ಆದ್ದರಿಂದ ಈ ದಿನವನ್ನು "ಕಾಮನ ಹುಣ್ಣಿಮೆ"ಯಾಗಿ ಆಚರಿಸಲ್ಪಡುತ್ತದೆ. ಬಣ್ಣದ ಹೋಳಿಯನ್ನು ಪ್ರಿಯರಾದವರ ಮೇಲೆ ಎರಚಿ ಸಂತೋಷ ಪಡುತ್ತಾರೆ. ಉತ್ತರ ಭಾರತದಲ್ಲಿ ಈ ಹೋಳಿ ಹೆಚ್ಚು ಪ್ರಸಿದ್ದಿ

Отправить комментарий

0 Комментарии