Hot Posts

10/recent/ticker-posts

ಮಹಾ ಶಿವರಾತ್ರಿಯ ಉಪವಾಸ ಮತ್ತು ಜಾಗರಣೆಯ ಮಹತ್ವ








೧. ಶಿವನನ್ನು
ಪೂಜಿಸುವುದರಿಂದ ಕರುಣಾಮಯಿಯಾದ ಶಿವನು ಸರ್ವರನ್ನು ಅನುಗ್ರಹಿಸುತ್ತಾನೆ ಎಂಬ ಪ್ರತೀತಿ ಇದೆ.. ಬೇಡರ
ಕಣ್ಣಪ್ಪನು
ಶಿವನನ್ನು ಪೂಜಿಸಿದ್ದರಿಂದ
ಅವನನ್ನು ನುಗ್ರಹಿಸಿ ಮುಕ್ತಿ ಮಾರ್ಗ ತೋರಿಸಿದನು.. ' ಸ್ಕಂದ ಪುರಾಣ 'ದ ಪ್ರಕಾರ ಬೇಡ ಚಂದನನಿಗೂ ಶಿವನು ಅನುಗ್ರ
ನೀಡಿದ್ದಾನೆ...
' ಗರುಡ
ಮತ್ತು
ಅಗ್ನಿ
ಪುರಾಣ
' ಗಳಲ್ಲಿ
ಉಲ್ಲೇಖವಿರುವಂತೆ, ಬೇಡ ಸುಂದರ ಸೇನನಿಗೂ ಶಿವನು ಆಶೀರ್ವಾದಿಸಿದ್ದಾನೆ.. ಹೀಗಾಗಿ ಮಹಾ
ಶಿವರಾತ್ರಿಯಂದು
ಉಪವಾಸ ಮಾಡಿ ಶಿವನಿಗೆ ಅಭಿಷೇಕ ಮಾಡಿ, ಬಿಲ್ವ ಪತ್ರೆಗಳನ್ನು
ಅರ್ಪಿಸುವುದರಿಂದ ಎಲ್ಲರಿಗೂ ಸದ್ಗತಿ
ಪ್ರಾಪ್ತವಾಯಿತು.
 

















೨. ಪ್ರತಿ ವರ್ಷದ ಶಿವರಾತ್ರಿಯ ಸಮಯದಲ್ಲಿ ಶಿವನು, ಪಾರ್ವತಿಯ ಜೊತೆಯಲ್ಲಿ ಭೂಮಿಗೆ ಆಗಮಿಸುತ್ತಾನೆ.. ಭೂ-ಸಂಚಾರ
ಮಾಡುತ್ತಾನೆ.. ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣಗೊಳ್ಳುತ್ತಾನೆ.. ಹೀಗಾಗಿ
ಶಿವರಾತ್ರಿಯ ಶಿವನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ
ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಇದೆ.










೩. ಮದುವೆಯಾಗದ
ಹೆಣ್ಣುಮಕ್ಕಳು ಶಿವಗುಣರೂಪಿಯಾದ ಅನುರೂಪ ಪತಿಗಾಗಿ ಪ್ರಾರ್ಥಿಸಿದರೆ
, ಮುತ್ತೈದೆಯರು ಪತಿಯ ಶ್ರೇಯೋಭಿವೃದ್ಧಿಗಾಗಿ
ಪ್ರಾರ್ಥಿಸುವುದು ಸಂಪ್ರದಾಯ.
ಶಿವರಾತ್ರಿಯಂದು ಶಿವನನ್ನು ಪೂಜಿಸಿದರೆ,
ಸುಖ, ಶಾಂತಿ, ಸಮೃದ್ಧಿ ದೊರೆಯುವುದೆಂಬ ನಂಬಿಕೆ
ಆಸ್ತಿಕರದು.










೪. ಕರುಣಾಮಯಿಯಾದ
ಶಿವನನ್ನು ಭಕ್ತಿ ಪೂರಕವಾಗಿ ಯಾರೇ ಪೂಜಿಸಿದರೂ ಅವರನ್ನು ಅನುಗ್ರಹಿಸುತ್ತಾನೆ.. ಹಿಂದು ಮುಂದು
ನೋಡದೇ ಅವರಿಗೆ ಬೇಡಿದ ವರಗಳನ್ನು ನೀಡುತ್ತಾನೆ.. ಭಕ್ತಿಗೆ ಮರುಳಾಗುವ ಶಿವನು ಹೀಗೆ ತನ್ನ
ಭಕ್ತರಿಗೆ ಬೇಡಿದ ವರವನ್ನು ನೀಡುವುದರ ಮೂಲಕ ಎಷ್ಟೋ ಸಲ ಸಂಕಟಕ್ಕೆ ಸಿಲುಕಿದ್ದೂ ಇದೆ.. ಆದರೆ ಎಂಥದ್ದೇ
ಸಂಕಟವಿದ್ದರೂ ಶಿವನು ಭಕ್ತರನ್ನು ಸದಾ ಅನುಗ್ರಹಿಸುತ್ತಲೇ ಇರುತ್ತಾನೆ.. ಅದಕ್ಕೆ “ಶಿವ
ಭಕ್ತನಿಗೆ ನರಕಾ ಇಲ್ಲ” ಅನ್ನೋ ಮಾತಿದೆ..










೫.       ಶಿವರಾತ್ರಿಯ ಮತ್ತೊಂದು ವಿಶೆಷವೆಂದರೆ, ಶಿವನು
ಪಾರ್ವತಿ ಹಿಮವಂತನ ಮಗಳಾದ ಗಿರಿಜೆಯನ್ನು ಅಂದರೆ ಪಾರ್ವತಿ ದೇವಿಯನ್ನು ವಿವಹವಾಗಿದ್ದು ಶಿವರಾತ್ರಿಯ
ದಿನವೇ.. ಪಾರ್ವತಿ ದೇವಿಯು ಶಿವರಾತ್ರಿಯ ಸಮಯದಲ್ಲಿ ಶಿವನನ್ನು ಪ್ರಾರ್ಥಿಸಿ.. ಶಿವನ ಜಪ ಮಾಡಿ
ಶಿವನನ್ನು ವಲಿಸಿಕೊಂಡು ವಿವಾಹಳಾದಳು... ಅಷ್ಟೇ ಅಲ್ಲ, ಶಿವನು ಸಮುದ್ರ ಮಂಥನದಿಂದ ಉದ್ಭವಿಸಿದ
ವಿಷವನ್ನು
ಸೇವಿಸಿ, ಜಗತ್ತನ್ನು ವಿನಾಶದಿಂದ
ಪಾರು ಮಾಡಿದ್ದು ಕೂಡ

ಇದೇ ಸಮಯದಲ್ಲಿ.. ಹೀಗೆ ಹಿಂದೂ ಪುರಾಣಗಳಲ್ಲಿ ಶಿವರಾತ್ರಿಗೆ ಮಹತ್ವದ ಹಿನ್ನೆಲೆ ಇದೆ..








Отправить комментарий

0 Комментарии